ಅಭಿಪ್ರಾಯ / ಸಲಹೆಗಳು

ಭೂ ಒಡೆತನ ಯೋಜನೆ

ಭೂ ಒಡೆತನ ಯೋಜನೆ

                                                                                                                                       
  

 • ಯೋಜನೆಯಡಿ ಪರಿಶಿಷ್ಟ ಪಂಗಡದ ಭೂ ರಹಿತ ಮಹಿಳಾಕೃಷಿ ಕಾರ್ಮಿಕರನ್ನು ಭೂ ಒಡೆಯರನ್ನಾಗಿ ಮಾಡುವ ಉದ್ದೇಶ ಹೊಂದಲಾಗಿರುತ್ತದೆ. ಖರೀದಿಸುವ ಜಮೀನು ಫಲಾಪೇಕ್ಷಿಯ ವಾಸಿಸುವ ಸ್ಧಳದಿಂದ 10 ಕಿಮೀ ವ್ಯಾಪ್ತಿಯಲ್ಲಿರಬೇಕು.

 • ಘಟಕ ವೆಚ್ಚದ ಮಿತಿಯೊಳಗೆ ಕನಿಷ್ಟ 2.00 ಎಕರೆ ಖುಷ್ಕಿ, 1.00 ಎಕರೆ ನೀರಾವರಿ, 1/2 ಎಕರೆ ಭಾಗಾಯ್ತು ಖರೀದಿಸಿ ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕರ ಹೆಸರಿನಲ್ಲಿ ನೊಂದಾಯಿಸಲಾಗುವುದು.

 • ಯೋಜನೆಯಡಿ ಪ್ರಸ್ತಾವನೆ ಸಲ್ಲಿಸಿ ಮಂಜೂರಾತಿಯನ್ನು ನೀಡುವ ಅಧಿಕಾರವನ್ನು ಆಯಾ ಜಿಲ್ಲೆಯಲ್ಲಿನ ಜಿಲ್ಲಾಧಿಕಾರಿಗಳಿಗೆ ನೀಡಲಾಗಿರುತ್ತದೆ.

 • ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸೀಮಿತಗೊಂಡಂತೆ ಈ ಯೋಜನೆಯಡಿ ಘಟಕ ವೆಚ್ಚವನ್ನು ರೂ.25.00 ಲಕ್ಷಗಳು ಮತ್ತು ಉಳಿದ 26 ಜಿಲ್ಲೆಗಳಲ್ಲಿ ಘಟಕ ವೆಚ್ಚವನ್ನು ರೂ.20.00 ಲಕ್ಷಗಳಿಗೆ ನಿಗದಿಪಡಿಸಲಾಗಿರುತ್ತದೆ.

 • ಒಟ್ಟು ಘಟಕ ವೆಚ್ಚದಲ್ಲಿ ಶೇ.50 ರಷ್ಟು ಸಹಾಯಧನ ಮತ್ತು ಶೇ.50 ರಷ್ಟು ಅವಧಿಸಾಲವಾಗಿರುತ್ತದೆ. ಅವಧಿಸಾಲವನ್ನು ನಿಗಮದಿಂದಲೇ ಭರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಶೇ.6ದರದಲ್ಲಿ ಬಡ್ಡಿ ವಿಧಿಸಲಾಗುತ್ತದೆ.  ಸಾಲ ಮತ್ತು ಬಡ್ಡಿಯನ್ನು 10 ವರ್ಷಗಳ ಅವಧಿಯಲ್ಲಿ ವಾರ್ಷಿಕ ಸಮ ಕಂತುಗಳಲ್ಲಿ ಮರುಪಾವತಿ ಮಾಡಬೇಕಾಗಿರುತ್ತದೆ. 

 • ಜಮೀನು ಮಾರಾಟ ಮಾಡುವ ಭೂ ಮಾಲೀಕರು ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಗೆ ಸೇರಿದವರಾಗಿರಬಾರದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಸಮಿತಿಯು ಜಮೀನಿನ ದರವನ್ನು ನಿಗದಿಪಡಿಸುತ್ತದೆ.

 

ಇತ್ತೀಚಿನ ನವೀಕರಣ​ : 31-07-2023 04:18 PM ಅನುಮೋದಕರು: Admin1ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080